Bellary | ಈಜಲು ತೆರಳಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವು

0
84


ಬಳ್ಳಾರಿ: ಕೆರೆಯಲ್ಲಿ ಈಜಲು (Swimming) ತೆರಳಿದ್ದ ಮೂವರು ಮಕ್ಕಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವಿಜಯನಗರ (Vijayanagar) ಜಿಲ್ಲೆಯ ಕೂಡ್ಲಿಗಿಯ ಕುಮತಿ ಗ್ರಾಮದಲ್ಲಿ ನಡೆದಿದೆ.

ಮೃತ ಮಕ್ಕಳನ್ನು ಸಾಗ#ರ್ (14), ಗುರು (14) ಮತ್ತು ವಿನಯ್ (11) ಎಂದು ಗುರುತಿಸಲಾಗಿದೆ. ಎಲ್ಲಾ ಮಕ್ಕಳು ಕುಮತಿ ಗ್ರಾಮದ ಒಂದೇ ಏರಿಯಾದವರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮಂಗಳೂರು ಪೊಲೀಸ್ ಇತಿಹಾಸದಲ್ಲೇ ಭರ್ಜರಿ ಬೇಟೆ – 6 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್‌

ಶಾಲೆಗೆ ದಸರಾ ರಜೆ ಇದ್ದ ಹಿನ್ನೆಲೆ ಮಕ್ಕಳು ಈಜಲು ಕೆರೆಗೆ ಹೋಗಿದ್ದರು. ಮೃತ ಮೂವರಿಗೂ ಸರಿಯಾಗಿ ಈಜು ಬರುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ಕಾನಾಹೊಸಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ ಇಂದೂ ಸಿಗ್ಲಿಲ್ಲ ಜಾಮೀನು – ವಿಚಾರಣೆ ನಾಳೆಗೆ ಮುಂದೂಡಿಕೆ

LEAVE A REPLY

Please enter your comment!
Please enter your name here