Mantralaya Temple: ಶ್ರೀ ರಾಘವೇಂದ್ರ ಸ್ವಾಮಿ (ರಾಯರು) ಕನ್ನಡಿಗರ ಆರಾಧ್ಯ ದೈವರಾಗಿದ್ದಾರೆ. ಆದರೆ ಇದೀಗ ಮಂತ್ರಾಲಯದ ವಿಚಾರವಾಗಿ ಆಂಧ್ರಪ್ರದೇಶದ ತೆಲುಗು ಭಾಷಿಕರು ಅನವಶ್ಯಕವಾಗಿ ವಿವಾದವೊಂದನ್ನು ಸೃಷ್ಟಿ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ.
ರಾಯರನ್ನು ಕನ್ನಡಿಗರು ಸ್ಮರಿಸುವ ಹಾಗೂ ಭಕ್ತಿಯಿಂದ ಹೇಳುವ ಪ್ರಮುಖ ಸಾಲುಗಳಾದ “ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ರತಾಯಚ ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ” ಎನ್ನುವ ವಿಶೇಷ ಸಾಲುಗಳ ಬಗ್ಗೆ ಆಂಧ್ರಪ್ರದೇಶದ ತೆಲುಗು ಭಾಷಿಕರು ಅನಗತ್ಯ ವಿವಾದವನ್ನು ಸೃಷ್ಟಿ ಮಾಡುತ್ತಿದ್ದಾರೆ. ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿ ಭಾಗದಲ್ಲಿರುವ ಮಂತ್ರಾಲಯ ದೇವಾಲದಯ ವಿಚಾರದಲ್ಲಿ ಇದೀಗ ಭಾಷಾ ವಿವಾದ ಸೃಷ್ಟಿಯಾಗಿದೆ. ಇದನ್ನು ತೆಲುಗು ಭಾಷಿಕರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಸೃಷ್ಟಿ ಮಾಡಿದ್ದು, ಇದಕ್ಕೆ ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದಾರೆ.
Andhra & Amaravati Updates ಎನ್ನುವ ಸೋಷಿಯಲ್ ಮೀಡಿಯಾ ಖಾತೆಯಿಂದ 📍ಮಂತ್ರಾಲಯ, ಆಂಧ್ರಪ್ರದೇಶ .. ಮಾನ್ಯ ಮುಖ್ಯಮಂತ್ರಿಗಳೇ, ಮಾನ್ಯ ಉಪಮುಖ್ಯಮಂತ್ರಿಗಳೇ, ತೆಲುಗು ಮಂಡಳಿ ಎಲ್ಲಿದೆ ಸರ್? ಮಂತ್ರಾಲಯ ಆಂಧ್ರಪ್ರದೇಶದ ಒಂದು ಭಾಗ, ಅಲ್ಲಿ ತೆಲುಗು ಭಾಷೆಯನ್ನು ಸಂಪೂರ್ಣವಾಗಿ ಹೇಗೆ ತ್ಯಜಿಸಬಹುದು? ಮೊದಲು, ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಕನ್ನಡದಲ್ಲಿ ಬರೆದಿರುವ “ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ರತಾಯಚ ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ” ಎನ್ನುವ ಬರಹವಿರುವ ಫೋಟೋವನ್ನು ಪೋಸ್ಟ್ ಮಾಡಿ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಹಲವು ತೆಲುಗು ಭಾಷಿಕರು ಸಹಮತ ವ್ಯಕ್ತಪಡಿಸಿ ಟ್ಯಾಗ್ ಮಾಡುತ್ತಿದ್ದು.
ಇದೀಗ ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮಂತ್ರಾಲಯದ ಪ್ರವೇಶದ್ವಾರದಲ್ಲಿ “ತೆಲುಗು ಭಾಷೆಯ”ಬರಹ ದೊಡ್ಡದಾಗಿ, ಸ್ಪಷ್ಟವಾದ ರೀತಿಯಲ್ಲಿ ಪ್ರದರ್ಶಿಸಬೇಕು. ಇತರ ಭಾಷೆಗಳನ್ನು ಸಹ ತೋರಿಸಬಹುದು, ಯಾವುದೇ ಆಕ್ಷೇಪಣೆ ಇಲ್ಲ, ಆದರೆ ದಯವಿಟ್ಟು ತೆಲುಗು ಭಾಷೆಯನ್ನು ಪ್ರಮುಖವಾಗಿ ಹೈಲೈಟ್ ಮಾಡಿ, ಏಕೆಂದರೆ ಅದು ನಮ್ಮ ಗುರುತು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಮತ್ತೊಬ್ಬ ತೆಲುಗು ನೆಟ್ಟಿಗರು ಟ್ವೀಟ್ ಮಾಡಿದ್ದಾರೆ.



